ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ : ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

Update: 2024-07-28 11:56 GMT

ದಾವಣಗೆರೆ : ರಾಜಸ್ಥಾನದಿಂದ ಬೆಂಗಳೂರಿಗೆ ಬಂದ್ದಿದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿಗೆ ರೈಲುಗಳ ಮೂಲಕ ನಾಯಿ ಮಾಂಸ ಸರಬರಾಜು ಆರೋಪ ಪ್ರಕರಣ ಸಂಬಂಧ ಜಿ.ಪರಮೇಶ್ವರ್ ಅವರು ರವಿವಾರ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ರಾಜಸ್ಥಾನದ ಮಾಂಸ ಮಾರಾಟಗಾರರು ಮೇಲೆ ನಾಯಿ ಮಾಂಸ ಮಾರಾಟ ಮಾಡುತ್ತಿದ್ದಾರೆ ಎಂದು ಅಪಾದನೆ ಮಾಡಲಾಗಿತ್ತು. ಅದರೆ, ವರದಿ ಕೈಸೇರಿದ್ದು ಅದು ಮೇಕೆ ಮಾಂಸ ಎಂದು ಗೊತ್ತಾಗಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

 ಅನಾವಶ್ಯಕವಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ :

 "ಮುಡಾ ಹಗರಣದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆದೇಶ ನೀಡಿದ್ದಾರೆ.‌ ಅದರೂ ಸಹ ಬಿಜೆಪಿಯವರು ಅನಾವಶ್ಯಕವಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೇ ಜನರಲ್ಲಿ ಸರಕಾರದ ವಿರುದ್ದ ತಪ್ಪು ತಿಳಿವಳಿಕೆ ಮೂಡಿಸುತ್ತಿದ್ದಾರೆ" ಎಂದರು

ಜನರಿಗೆ ಸತ್ಯ ತಿಳಿಸುವ ಸಲುವಾಗಿ ಮುಖ್ಯಮಂತ್ರಿಗಳು ಕಮೀಷನ್ ನೇಮಿಸಿದ್ದಾರೆ. ಯಾವುದೇ ಕಾನೂನು ಬಾಹಿರ ಕೆಲಸ ಅಗಿಲ್ಲ. ಜನರಿಗೆ ಸತ್ಯ ತಿಳಿಸಲು ಕಮಿಷನ್ ನೇಮಿಸಿ ತನಿಖೆ ಕೈಗೊಂಡಿದ್ದಾರೆ. ಇದರಿಂದ ಜನರಿಗೆ ನಿಜ ತಿಳಿಯಲಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News