ಡಿ.ಕೆ.ಶಿವಕುಮಾರ್ ಅವರು ಡಿಸೆಂಬರ್ ಹೊತ್ತಿಗೆ ರಾಜ್ಯದ ಸಿಎಂ ಆಗುವುದು ನಿಶ್ಚಿತ : ಶಾಸಕ ಬಸವರಾಜು ವಿ.ಶಿವಗಂಗಾ
Update: 2025-03-02 23:16 IST

ಬಸವರಾಜು ವಿ.ಶಿವಗಂಗಾ
ದಾವಣಗೆರೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಿಸೆಂಬರ್ ಹೊತ್ತಿಗೆ ರಾಜ್ಯದ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಶಿವಕುಮಾರ್ ಅವರ ಪಾತ್ರ ಪ್ರಮುಖವಾದದ್ದು. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಪಕ್ಷಕ್ಕಾಗಿ ಹಣ ಖರ್ಚು ಮಾಡಿದ್ದಾರೆ. ಅವರ ಮೌನವನ್ನು ದೌರ್ಬಲ್ಯ ಎಂದು ಭಾವಿಸಬೇಕಿಲ್ಲ ಎಂದರು.
ವರ್ಷಾಂತ್ಯಕ್ಕೆ ಡಿಕೆಶಿ ಮುಖ್ಯಮಂತ್ರಿಯಾದರೆ ಮುಂದಿನ ಅವಧಿಗೂ ಅವರೇ ಮುಂದುವರಿಯಲಿದ್ದಾರೆ. ಏಳೂವರೆ ವರ್ಷ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಅನುಮಾನ ಇರುವವರಿಗೆ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿದರು.