ಇಸ್ಮಾಯೀಲ್ ನಿಧನ
Update: 2023-08-26 16:42 GMT
ಉಪ್ಪಿನಂಗಡಿ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ನಿವಾಸಿ ಇಸ್ಮಾಯೀಲ್ ಎಸ್.ಕೆ. (66) ಆ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಹಿರೇಬಂಡಾಡಿ ಗ್ರಾ.ಪಂ.ನ ನೀರು ಸರಬರಾಜು ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಇವರು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.