ಅಬ್ದುಲ್ ಹಮೀದ್ ಬಿತ್ತ್ ಪಾದೆ

Update: 2024-09-10 13:19 GMT

ಮಂಗಳೂರು: ನೀರುಮಾರ್ಗ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ, ಬಿತ್ತ್ ಪಾದೆ ಬದ್ರಿಯಾ ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷ ಅಬ್ದುಲ್ ಹಮೀದ್ ಬಿತ್ತ್ ಪಾದೆ (55) ಹೃದಯಾಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಅಬ್ದುಲ್ ಹಮೀದ್ ಅವರು ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದು, ಪ್ರಸ್ತುತ ಗ್ರಾಮ ಪಂಚಾಯಿತಿ ಸದಸ್ಯರೂ ಆಗಿದ್ದಾರೆ. ಗ್ರಾಮದಲ್ಲಿ ಎಲ್ಲರೊಂದಿಗೂ ಉತ್ತಮ ಒಡನಾಟ ಹೊಂದಿ, ಸೌಹಾರ್ದತೆಗೆ ಆದ್ಯತೆ ನೀಡುತ್ತಿದ್ದರು. ಮಸೀದಿ ಅಧ್ಯಕ್ಷರಾಗಿ ಧಾರ್ಮಿಕ, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಸಂತಾಪ: ಹಮೀದ್ ಅವರ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ. ರಮಾನಾಥ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ನೀರುಮಾರ್ಗ ಗ್ರಾ.ಪಂ. ಅಧ್ಯಕ್ಷ ಶ್ರೀಧರ್, ಉಪಾಧ್ಯಕ್ಷೆ ಮೋಲಿ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್ ಕೆ., ಕೆಡಿಪಿ ನಾಮನಿರ್ದೇಶಿತ ಸದಸ್ಯ ಮೆಲ್ವಿನ್ ಡಿಸೋಜ, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಪದ್ಮನಾಭ ಕೋಟ್ಯಾನ್, ನೀರುಮಾರ್ಗ ವಲಯ ಕಾಂಗ್ರೆಸ್ ಅಧ್ಯಕ್ಷ ವಾಲ್ಟರ್ ಡಿಕುನ್ಹಾ, ಗ್ರಾ.ಪಂ. ಸದಸ್ಯರಾದ ಭಾಸ್ಕರ್ ಮಾಣೂರು, ಕೀರ್ತಿರಾಜ್ ಗುರಿಹಿತ್ಲು, ರೋಹಿತ್ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್