ಅಬ್ದುಲ್ ರಝಾಕ್ ನಿಧನ
Update: 2023-08-16 14:41 GMT
ಮಂಗಳೂರು, ಆ. 16 : ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕುದುರೆಗುಂಡಿಯವರಾದ ಸದ್ಯ ಉಡುಪಿ ಜಿಲ್ಲೆಯ ಬೆಳಪುವಿನಲ್ಲಿ ವಾಸವಾಗಿದ್ದ ಅಬ್ದುಲ್ ರಝಾಕ್ ಅವರು ಹೃದಯಾಘಾತದಿಂದ ಬುಧವಾರ ಸಂಜೆ ತಮ್ಮ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಮೂವರು ಗಂಡು ಮಕ್ಕಳು, ಒಬ್ಬಳು ಹೆಣ್ಣು ಮಗಳು ಹಾಗು ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರ ಗುರುವಾರ ಬೆಳಗ್ಗೆ ಕುದುರೆಗುಂಡಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.