ಅಹ್ಮದ್ ಕಾಟಿಪಳ್ಳ
Update: 2024-08-24 15:47 GMT
ಮಂಗಳೂರು: ಹಿರಿಯ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ಕೆ.ಅಹ್ಮದ್ ಕಾಟಿಪಳ್ಳ (67) ಶನಿವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ , ನಾಲ್ಕು ಪುತ್ರರು, 2 ಪುತ್ರಿಯರನ್ನು ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.
ಸಂತಾಪ: ಅಹ್ಮದ್ ಕಾಟಿಪಳ್ಳ ನಿಧನಕ್ಕೆ ಮಾಜಿ ಶಾಸಕ ಮೊಯ್ದಿನ್ ಬಾವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಸೋಶಿಯಲ್ ವೆಲ್ಫೇರ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಹರೇಕಳ, ಸಾಮಾಜಿಕ ಕಾರ್ಯಕರ್ತ ರಫೀಕ್ ಮಂಗಳೂರು, ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಮಂಗಳೂರು ಬಾವ ಸಂತಾಪ ಸೂಚಿಸಿದ್ದಾರೆ.