ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Update: 2024-11-19 07:22 GMT

ಬೆಳ್ತಂಗಡಿ: ಯುವ ಪತ್ರಕರ್ತ ಭುವನೇಂದ್ರ ಪುದುವೆಟ್ಟು(42) ಅವರು ನ.19ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ಅತ್ತಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನ.19ರಂದು ಕೊನೆಯುಸಿರೆಳೆದಿದ್ದಾರೆ.

ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಕೆಲವು ಸಮಯಗಳಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿದ್ದರು.

ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಭುವನೇಂದ್ರ ಅವರ ಪಾರ್ಥೀವ ಶರೀರವನ್ನು  ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಿಂದ ಪುದುವೆಟ್ಟು ಮನೆಗೆ ಕರೆ ತಂದ ಬಳಿಕ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್