ಸಿ.ಎಚ್. ಸುಬ್ರಹ್ಮಣ್ಯ ಭಟ್ ನಿಧನ
Update: 2023-08-11 15:09 GMT
ವಿಟ್ಲ : ಪದವಿಪೂರ್ವ ಕಾಲೇಜಿನ ನಿವೃತ್ತ ಅಧ್ಯಾಪಕರಾದ ವಿಟ್ಲಪಡ್ನೂರು ಗ್ರಾಮದ ಚನಿಲ ನಿವಾಸಿ ಸಿ.ಎಚ್ ಸುಬ್ರಹ್ಮಣ್ಯ ಭಟ್ (63) ರವರು ಇಂದು ನಿಧನರಾದರು.
ಸುಬ್ರಹ್ಮಣ್ಯ ಭಟ್ ರವರು ಲೋ ಬಿ.ಪಿ.ಸಮಸ್ಯೆಗೆ ಮಂಗಳೂರು ಖಾಸಗಿ ಆಸ್ಪತ್ರೆಗೆ ನಿನ್ನೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.
ಸುಬ್ರಹ್ಮಣ್ಯ ಭಟ್ ರವರು ಹವ್ಯಾಸಿ ಯಕ್ಷಗಾನ ಕಲಾವಿದರೂ ಆಗಿದ್ದರು. ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಕನ್ನಡ ಅಧ್ಯಾಪಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.