ಕಲಬುರಗಿ | ಹಿರಿಯ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ನಿಧನ

Update: 2025-04-05 22:36 IST
ಕಲಬುರಗಿ | ಹಿರಿಯ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ನಿಧನ

ನಾಗಯ್ಯಸ್ವಾಮಿ ಅಲ್ಲೂರ 

  • whatsapp icon

ಕಲಬುರಗಿ : ಚಿತ್ತಾಪುರ ತಾಲೂಕಿನ ಅಲ್ಲೂರ (ಬಿ) ಗ್ರಾಮದ ನಿವಾಸಿ ಹಿರಿಯ ಪತ್ರಕರ್ತ, ಲೇಖಕ ನಾಗಯ್ಯಸ್ವಾಮಿ ಅಲ್ಲೂರ (55), ಶನಿವಾರ ಸಂಜೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಚಿತ್ತಾಪುರ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸೋಹದರ ರಾಚಯ್ಯಸ್ವಾಮಿ ಅಲ್ಲೂರ ಸೇರಿದಂತೆ ಅಪಾರ ಬಂದು ಬಳಗ ಅವರು ಅಗಲಿದ್ದಾರೆ.

ಅಂತ್ಯಕ್ರಿಯೆ ಅಲ್ಲೂರ (ಬಿ) ಗ್ರಾಮದ ಸ್ವಂತ ಜಮೀನಿನಲ್ಲಿ ಭಾನುವಾರ ಮದ್ಯಾಹ್ನ 2 ಗಂಟೆಗೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು, ಜಾನಪದ ಸಾಹಿತ್ಯ ಪರಿಷತ್‌, ನಾಗಾವಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ವಿಶ್ವ ಜನ ಸಂಸ್ಥೆಯ ಅಧ್ಯಕ್ಷರಾಗಿ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಯ ತಾಲೂಕು ವರದಿಗಾರರಾಗಿ ಸೇವೆಯಲ್ಲಿದ್ದರು ಹಾಗೂ ಅಳ್ಳೋಳ್ಳಿ ಗ್ರಾಮದಲ್ಲಿ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇವರು ಸಾಹಿತ್ಯ ಸಾಂಸ್ಕೃತಿಕ, ಪತ್ರಿಕಾ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಸೇವೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News