ಕರಾಮತ್ ಅಲಿ

Update: 2023-11-15 10:21 GMT

ಉಡುಪಿ, ನ.15: ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ, ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗದ ನಿವಾಸಿ ಕರಾಮತ್ ಅಲಿ(77) ಸೋಮವಾರ ನಿಧನರಾದರು.

ಮಾಜಿ ಗೃಹ ಸಚಿವ ಡಾ.ವಿ.ಎಸ್.ಆಚಾರ್ಯರವರ ನಿಕಟವರ್ತಿಯಾಗಿದ್ದ ಇವರು, ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ ಜೋಡಿಸುವ ಜೊತೆಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಸಮುದಾಯಕ್ಕೆ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಿದ್ದರು.

ಮೃತರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರಾಮತ್ ಅಲಿಯವರ ನಿವಾಸಕ್ಕೆ ಪಕ್ಷದ ಪದಾಧಿಕಾರಿಗಳೊಂದಿಗೆ ಭೇಟಿ ನೀಡಿದ ಕುಯಿಲಾಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಪ್ರಮುಖರಾದ ರವಿ ಅಮೀನ್, ಪೂರ್ಣಿಮಾ ಸುರೇಶ್ ನಾಯಕ್, ವೀಣಾ ಎಸ್.ಶೆಟ್ಟಿ, ದಾವೂದ್ ಅಬೂಬಕ್ಕರ್, ಗಿರೀಶ್ ಎಂ. ಅಂಚನ್, ದಿನಕರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್