ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ ನಿಧನ

Update: 2023-10-08 13:32 GMT

ಉಡುಪಿ: ಬಡಗುತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ಮೂರೂರು ವಿಷ್ಣುಭಟ್ (65) ಇಂದು ಉತ್ತರ ಕನ್ನಡದ ಸಿದ್ಧಾಪುರದಲ್ಲಿ ನಿಧನರಾದರು.

ಇವರು ಗುಂಡುಬಾಳ, ಅಮೃತೇಶ್ವರೀ, ಹಿರೇಮಹಾಲಿಂಗೆಶ್ವರ, ಶಿರಸಿ, ಪೆರ್ಡೂರು, ಮಂದಾರ್ತಿ, ಸಾಲಿಗ್ರಾಮ, ಪೂರ್ಣ ಚಂದ್ರ ಮೇಳಗಳಲ್ಲಿ ನಾಲ್ಕು ದಶಕಗಳ ಕಲಾ ಸೇವೆಗೈದಿದ್ದರು. ದಾಕ್ಷಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮೊದಲಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದರು.

ತಮ್ಮ ಭಾವಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿ ದ್ದರು. ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕರಗಳಿಗೆ ಭಾಜನರಾಗಿದ್ದರು. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.

ಅವರ ನಿಧಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್