ಪ್ರಭಾಕರ ಎಸ್. ನಾಯಕ್

Update: 2023-12-08 14:58 GMT

ಉಡುಪಿ: ನಿಟ್ಟೂರು ಪ್ರೌಢಶಾಲೆಯಲ್ಲಿ 27 ವರ್ಷಗಳ ಕಾಲ ಗಣಿತ ಅಧ್ಯಾಪಕರಾಗಿ ಸೇವೆಸಲ್ಲಿಸಿದ್ದ ಮುದರಂಗಡಿಯ ಪ್ರಭಾಕರ ಎಸ್. ನಾಯಕ್ (75) ಶುಕ್ರವಾರ ಕಟಪಾಡಿಯ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.

ಸರಕಾರಿ ಪ್ರೌಢಶಾಲೆ ಮುದರಂಗಡಿಯಲ್ಲಿ ಎರಡು ವರ್ಷಗಳ ಕಾಲ ತಾತ್ಕಾಲಿಕ ನೆಲೆಯಲ್ಲಿ ಕೆಲಸಮಾಡಿದ್ದರು. ಬಂಟಕಲ್ಲು ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಮತ್ತು ಮುದರಂಗಡಿಯ ಹಲವಾರು ಯಕ್ಷಗಾನ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಹವ್ಯಾಸಿ ತಾಳಮದ್ದಲೆ ಮತ್ತು ಯಕ್ಷಗಾನ ಕಲಾವಿದರಾಗಿಯೂ ಗುರುತಿಸಿ ಕೊಂಡಿದ್ದ ಇವರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಶಿಷ್ಯವರ್ಗವನ್ನ ಅಗಲಿದ್ದಾರೆ.

ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ನಾಯಕ್ ನಿಧನಕ್ಕೆ ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಕೆ.ರಘುಪತಿ ಭಟ್, ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ನಿಟ್ಟೂರು ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಅನಸೂಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ