ಅಶ್ರಫ್
Update: 2024-02-21 13:38 GMT
ವಿಟ್ಲ: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹ್ಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು. ಇವರು ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ ಮೂರು ದಿನದ ಸ್ವದೇಶಕ್ಕೆ ಬಂದಿ ದ್ದರು. ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿ ಇದ್ದಾರೆ.