ಉಮ್ಮರ್ ಫಾರೂಕ್ ತುಂಬೆ
Update: 2024-03-02 14:37 GMT
ಮಂಗಳೂರು: ಬಂಟ್ವಾಳ ತಾಲೂಕಿನ ತುಂಬೆ ನಿವಾಸಿ, ಉದ್ಯಮಿ ಉಮ್ಮರ್ ಫಾರೂಕ್ ತುಂಬೆ (44) ಶುಕ್ರವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.
ಕೆಲವು ತಿಂಗಳಿನಿಂದ ಅಸೌಖ್ಯದಿಂದಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಶನಿವಾರ ಮಧ್ಯಾಹ್ನ ತುಂಬೆಯ ಈದ್ಗಾ ಮಸ್ಜಿದ್ ಆವರಣದಲ್ಲಿ ದಫನ ಕಾರ್ಯ ನೆರವೇರಿಸಲಾಯಿತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.