ಅಂಕದಡ್ಕ ರಾಘವ ಪೂಜಾರಿ
Update: 2024-03-08 15:21 GMT
ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬೋಳಂತೂರು ಕೋಟ್ಯಾನ್ ಕುಟುಂಬದ ಹಿರಿಯರಾದ ಅಂಕದಡ್ಕ ನಿವಾಸಿ ರಾಘವ ಪೂಜಾರಿ (95) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ರಾಘವ ಪೂಜಾರಿ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.