ಇಮ್ರಾನ್ ಕಾಪು
Update: 2024-05-21 12:01 GMT
ಕಾಪು: ಕೊಪ್ಪಲಂಗಡಿ ನಿವಾಸಿ ಕೆ.ಉಂಞಿ ಮೋನು ಅವರ ಮಗ ಇಮ್ರಾನ್ ಕಾಪು(39) ಅಲ್ಪಕಾಲದ ಅಸೌಖ್ಯದಿಂದ ಮೇ 21ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ದುಬೈಯಲ್ಲಿ ಉದ್ಯೋಗಿಯಾಗಿದ್ದ ಇವರು, ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಮಂಗಳೂರಿಗೆ ಕರೆ ತಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಉತ್ತಮ ಕ್ರೀಡಾಪಟು ಹಾಗೂ ಸಮಾಜ ಸೇವಕರಾಗಿದ್ದ ಇವರು, ಉಡುಪಿ ಉಪೇಂದ್ರ ಪೈ ಮೊಮೇರಿಯಲ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಮತ್ತು ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.