ಚಂದ್ರಶೇಖರ ಕುಂಜತ್ತಾಯ
Update: 2024-05-23 16:13 GMT
ಪುತ್ತೂರು: ಸಂತ ಫಿಲೋಮಿನಾ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕ, ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ಚಂದ್ರಶೇಖರ ಕುಂಜತ್ತಾಯ (77) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ಬೆಳಗ್ಗಿನ ಜಾವ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪಂಜ ಹೈಸ್ಕೂಲಿನಲ್ಲಿ ಗಣಿತ ಹಾಗೂ ವಿಜ್ಞಾನ ಶಿಕ್ಷಕರಾಗಿ ವೃತ್ತಿ ಜೀವನವನ್ನು ಆರಂಭಿಸಿದ ಅವರು ಬಳಿಕ ಸಂತ ಫಿಲೋಮಿನಾ ಹೈಸ್ಕೂಲಿನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ತನ್ನ ಮನೆಯಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ಸಂಜೆ ಹೊತ್ತು ಉಚಿತವಾಗಿ ಮನೆ ಪಾಠವನ್ನು ಹೇಳಿಕೊಡುತ್ತಿದ್ದರು. ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.