ರಮೇಶ್ ಹೆಗ್ಡೆ

Update: 2024-06-02 15:58 GMT

ಉಡುಪಿ, ಜೂ.2: ಆತ್ರಾಡಿಯ ಹೊಟೇಲ್ ಶ್ರೀಗುರು ಮತ್ತು ಶ್ರೀನಿಧಿ ಬಾರ್ ಹಾಗೂ ರೆಸ್ಟೋರೆಂಟ್ ಮಾಲಕ ಹಿರೇಬೆಟ್ಟು ರಮೇಶ್ ಹೆಗ್ಡೆ(79) ಜೂ.1ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಇವರು ಹಿರೇಬೆಟ್ಟು ಶ್ರೀದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ಬಾಳ್ಕಟ್ಟ ಬ್ರಹ್ಮ ಬೈದರ್ಕಳ ಗರಡಿಯ ಸಮಿತಿಯಲ್ಲಿ ಪದಾಧಿ ಕಾರಿಯಾಗಿ ತೊಡಗಿಸಿಕೊಂಡಿದ್ದರು. ರವಿವಾರ ಹಿರೇಬೆಟ್ಟಿನ ಸ್ವಗೃಹದ ತೋಟದಲ್ಲಿ ನಡೆದ ಅಂತ್ಯ ಸಂಸ್ಕಾರದಲ್ಲಿ ಉಡುಪಿಯ ವಕೀಲರಾದ ಶಾಂತರಾಮ್ ಶೆಟ್ಟಿ, ಮಟ್ಟಾರ್ ರತ್ನಾಕರ್ ಹೆಗ್ಡೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ್ ಶೆಟ್ಟಿ ಹೆರ್ಗ, ಜಿಲ್ಲಾ ವಕ್ತಾರ ವಿಜಯ್ ಕುಮಾರ್ ಸೇರಿದಂತೆ ಸಾವಿರಾರು ಜನರು ಭಾಗಿಯಾಗಿದ್ದರು.

ಮೃತರು ಪತ್ನಿ, ಉಡುಪಿ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂಧ್ರ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಮೀದ್ ಹಾಜಿ
ಭೋಜ ಪೂಜಾರಿ
ಡಾ. ಆಶಾ ಭಟ್