ಎಂ ದಿವಾಕರ ಶೆಟ್ಟಿ

Update: 2024-06-23 14:59 GMT

ಉಪ್ಪಿನಂಗಡಿ : ಇಲ್ಲಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ(ನಿ) ಇದರ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ದಿವಾಕರ ಶೆಟ್ಟಿ(76) ಅಲ್ಪ ಕಾಲದ ಅನಾರೋಗ್ಯದಿಂದಾಗಿ ಮಂಗಳೂರಿನಲ್ಲಿಂದು ನಿಧನರಾದರು.

ಸಹಕಾರಿ ಸಂಘದಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿ , ಸಂಘದ ಅಭಿವೃದ್ಧಿಯಲ್ಲಿ ಪ್ರಧಾನ ಪಾತ್ರವಹಿಸಿದ್ದ ಇವರು, ನಿವೃತ್ತಿಯ ನಂತರ ಇಳಂತಿಲ ಗ್ರಾಮದ ಬನ್ನೆಂಗಳದಲ್ಲಿ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿದ್ದರು. ಉಪ್ಪಿನಂಗಡಿ ಕಾಳಿಕಾಂಬಾ ಭಜನಾ ಮಂಡಳಿಯ ಲೆಕ್ಕ ಪರಿಶೋಧಕರಾಗಿಯೂ , ಅನ್ಯಾನ್ಯ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಜನಾನುರಾಗಿಯಾಗಿದ್ದ ಇವರು, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಡಾ. ಆಶಾ ಭಟ್