ಶಶಿಶೇಖರ ಭಟ್ ಕರಂದಾಡಿ

Update: 2024-10-03 16:46 GMT

ಕಾಪು: ಉಚ್ಚಿಲ ಸರಸ್ವತಿ ಮಂದಿರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಶಶಿಶೇಖರ ಭಟ್ ಕರಂದಾಡಿ (68) ಅವರು ಅ.3ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಅವರು ಉಚ್ಚಿಲ ಸರಸ್ವತಿ ಮಂದಿರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 38 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಮುಖ್ಯೋಪಾಧ್ಯಾಯ ಹುದ್ದೆಗೆ ಭಡ್ತಿ ಹೊಂದಿ ಎರಡು ವರ್ಷಗಳ ಬಳಿಕ ನಿವೃತ್ತರಾಗಿದ್ದರು.

ಕರಂದಾಡಿ ಶ್ರೀ ರಾಮ ಅನುದಾನಿತ ಹಿ. ಪ್ರಾ. ಶಾಲೆಯ ಮಾರ್ಗದರ್ಶಕರಾಗಿ, ಹವ್ಯಾಸಿ ನಾಟಕ ಕಲಾವಿದರಾಗಿ, ಅಧ್ಯಾಪಕ ಕೇಂದ್ರದ ಕಾರ್ಯದರ್ಶಿಯಾಗಿ, ಉಚ್ಚಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಾಂಸ್ಕೃತಿಕ ಸಂಘಟಕರಾಗಿಯೂ ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್