ಇಂದ್ರಾಳಿ ಶ್ರೀಧರ್ ಭಟ್

Update: 2024-10-05 12:00 GMT

ಉಡುಪಿ, ಅ.5: ಇಂದ್ರಾಳಿಯ ಶ್ರೀಧರ್ ಭಟ್(66) ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ನಿಧನರಾದರು.

ಇವರು ಹಲವಾರು ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಇಂದ್ರಾಳಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿದ್ದರು. ಇಂದ್ರಾಳಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಇವರು ಪತ್ನಿ, ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್