ಮಾಧವ ಪೂಜಾರಿ ಅಂಬಲಪಾಡಿ

Update: 2024-10-23 16:07 GMT

ಉಡುಪಿ, ಅ.23: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಶ್ರೀವಿಠೋಬ ಭಜನಾ ಮಂದಿರ ಪರಿಸರದ ನಿವಾಸಿ ಕರ್ನಾಟಕ ಪಾಲಿಟೆಕ್ನಿಕ್‌ನ ನಿವೃತ್ತ ಉದ್ಯೋಗಿ ಎ.ಮಾಧವ ಪೂಜಾರಿ (79) ಅ.22 ರಂದು ಹೃದಯಾಘಾತದಿಂದ ನಿಧನರಾದರು.

ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಯ ಮಂಗಳೂರು, ಬಳ್ಳಾರಿ, ಚಿಕ್ಕಮಗಳೂರು ಕಚೇರಿಗಳಲ್ಲಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಸಂಘದ ಭಜನಾ ಸಹ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ವರ್ಗ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್