ಇಬ್ರಾಹಿಂ ಕೂರ್ನಡ್ಕ
Update: 2024-11-09 13:48 GMT
ಪುತ್ತೂರು: ಹಿರಿಯ ಕಾಂಗ್ರೆಸ್ ನಾಯಕ, ಕೆಮ್ಮಿಂಜೆ ಗ್ರಾಮ ಪಂಚಾಯತ್ ನ ಪ್ರಥಮ ಅಧ್ಯಕ್ಷರಾಗಿದ್ದ ಕೂರ್ನಡ್ಕ ನಿವಾಸಿ ಇಬ್ರಾಹಿಂ (85) ಅವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು.
ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಇಬ್ರಾಹಿಂ ಅವರು ಕೂರ್ನಡ್ಕ ಫೀರ್ ಮೊಹಲ್ಲಾ ಮಸೀದಿ ಕಮಿಟಿಯಲ್ಲಿ ಹಲವು ವರ್ಷಗಳ ಕಾಲ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸಂಪ್ಯ ಮಂಡಲ ಪಂಚಾಯತ್ ಸದಸ್ಯರಾಗಿ ಬಳಿಕ ಕೆಮ್ಮಿಂಜೆ ಗ್ರಾಪಂ ಸದಸ್ಯರಾಗಿ, ಅಧ್ಯಕ್ಷ ರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.