ಇಮ್ತಿಯಾಝ್ ಅಹ್ಮದ್ ಮನ್ನಾ

Update: 2024-11-15 11:32 GMT

ಉಡುಪಿ: ಉಡುಪಿಯ ಹಾಶಿಮಿ ಮಸೀದಿಯ ಹಿರಿಯ ಜಮಾತ್ ಸದಸ್ಯ ಇಮ್ತಿಯಾಝ್ ಅಹ್ಮದ್ ಮನ್ನಾ(64) ಅಲ್ಪ ಕಾಲದ ಅಸೌಖ್ಯದಿಂದ ಇಂದು ತೋನ್ಸೆ ಹೂಡೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.

ಇವರು ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಸೇರಿದಂತೆ ಐವರು ಸಹೋದರರು, ಇಬ್ಬರು ಸಹೋದರಿಯರು, ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಉಡುಪಿಯ ಹಾಶಿಮಿ ಮಸೀದಿಯ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್