ಪಕಳಕುಂಜ ಶಾಂ ಭಟ್
ವಿಟ್ಲ: ನಿವೃತ್ತ ಅಧ್ಯಾಪಕ ಯಕ್ಷಗಾನ ಅರ್ಥಧಾರಿ ಪಕಳಕುಂಜ ನಿವಾಸಿ ಶ್ಯಾಮ್ ಭಟ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪಕಳಕುಂಜದಲ್ಲಿ ವಾಸ್ತವ್ಯ ವಿದ್ದ ಶ್ಯಾಮ ಭಟ್ಟರು ಪ್ರಸ್ತುತ ಅಳಿಕೆಯಲ್ಲಿ ನೆಲೆಸಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ವಿಠಲ ಪದವಿಪೂರ್ವ ಕಾಲೇಜು ವಿಟ್ಲದಲ್ಲಿ 32 ವರ್ಷ ಅಧ್ಯಾಪಕನಾಗಿ ಸೇವೆ ಸಲ್ಲಿಸಿ ಸಹೋದ್ಯೋಗಿಗಳ ಮೆಚ್ಚುಗೆಗೆ, ವಿದ್ಯಾರ್ಥಿಗಳ ಗೌರವಕ್ಕೆ ಪಾತ್ರರಾಗಿದ್ದರು. ಇವರು ಬರೆದ ಅಪ್ರಕಟಿತವಾದ ಅನೇಕ ಪುಸ್ತಕಗಳಿವೆ. ಉಳಿಯ ಧನ್ವಂತರೀ ಯಕ್ಷಗಾನ ಕಲಾ ಸಂಘದ ವತಿಯಿಂದ ನಡೆದ ತಾಳಮದ್ದಳೆ ಸ್ಪರ್ಧೆಯಲ್ಲಿ ಯಕ್ಷಸಿಂಧೂರ ಪ್ರತಿಷ್ಠಾನ, ವಿಟ್ಲ ತಂಡಕ್ಕೆ ಪ್ರಥಮ ಪ್ರಶಸ್ತಿ ಬಂದಿತ್ತು. ಆ ತಂಡದ ಸದಸ್ಯನಾಗಿ ಶ್ಯಾಮ ಭಟ್ಟರು ಶ್ರೇಷ್ಠ ಅರ್ಥಧಾರಿ ವೈಯುಕ್ತಿಕ ಪ್ರಶಸ್ತಿಯನ್ನು ಪಡೆದಿ ದ್ದರು. ಇನ್ನೂ ಹಲವೆಡೆಗಳಲ್ಲಿ ಸಂಘ-ಸಂಸ್ಥೆಗಳಿಂದ ಸನ್ಮಾನಗಳನ್ನು ಪಡೆದ ಅವರು ಒರಿಸ್ಸಾದಲ್ಲಿ ಕನ್ನಡ ಸಂಘದ ವತಿಯಿಂದ ಸುನಾಬೇಡ ಎಂಬಲ್ಲಿ (1984), ಬೆಂಗಳೂರು, ಮುಂಬಯಿ ಮೊದಲಾದ ಕಡೆಗಳಲ್ಲಿ ತಾಳಮದ್ದಳೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.