ಹರಿಶ್ಚಂದ್ರ
ಮಂಗಳೂರು: ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಕೆ.ಹರಿಶ್ಚಂದ್ರ (71) ಶುಕ್ರವಾರ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕಾವೂರು ಶ್ರೀ ಮಹಾಲಿಂಗೇಶ್ವರ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ಮಾಜಿ ಅಧ್ಯಕ್ಷ, ಯಕ್ಷಮಿತ್ರರು ಕಾವೂರು ಇದರ ಅಧ್ಯಕ್ಷರಾಗಿದ್ದರು. ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಅಕೌಂಟೆಂಟ್ ಆಗಿ ಉದ್ಯೋಗ ಆರಂಭಿಸಿ ಪ್ರಧಾನ ವ್ಯವಸ್ಥಾಪಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಳಿಕ ಎರಡು ಅವಧಿಗೆ ಅಧ್ಯಕ್ಷರಾಗಿ ಬ್ಯಾಂಕ್‌ನ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ಜನಾನುರಾಗಿಯಾಗಿದ್ದರು.
ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.