ರಾಜು ಎನ್.ಪೂಜಾರಿ
Update: 2023-07-07 14:44 GMT
ಪಡುಬಿದ್ರಿ : ಪಲಿಮಾರು ಗ್ರಾಮದ ಅವರಾಲು ಮಟ್ಟು ನಿವಾಸಿ ರಾಜು ಎನ್ ಪೂಜಾರಿ (87) ಅವರು ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಗ್ಗೆ ನಿಧನರಾದರು.
ಮುಂಬೈನ ಬ್ಯಾಂಕ್ ಆಫ್ ಬರೋಡಾದಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿ ಹುಟ್ಟೂರಿಗೆ ಬಂದು ನೆಲೆಸಿದ್ದ ಅವರು ಕೃಷಿ ಕಾರ್ಯ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು.
ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರ ಅಕ್ಕನ ಪತಿಯಾಗಿದ್ದ ರಾಜು ಪೂಜಾರಿ ಅವರು, ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಅವರಾಲು ಮಟ್ಟುವಿನ ಸ್ವಗೃಹದಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.