ಸೀತಾರಾಮ ಶೆಟ್ಟಿ ಕಂಬಳತ್ತಡ್ಡ ನಿಧನ

Update: 2023-08-23 13:48 GMT

ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಕಂಬಳತ್ತಡ್ಡ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಉದ್ಯಮಿ ಸೀತಾರಾಮ ಶೆಟ್ಟಿ(47) ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದರು.

ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿದ್ದ ಸೀತಾರಾಮ ಶೆಟ್ಟಿ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಸೀತಾರಾಮ ಶೆಟ್ಟಿ ಅವರು ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತ್ತಾಡಿ ಕಲ್ಲಗುಡ್ಡೆ ಎಂಬಲ್ಲಿ ಬಾರ್ ಮತ್ತು ರೆಸ್ಟೋರೆಂಟ್‍ನ್ನು ನಡೆಸುತ್ತಿದ್ದು, ಬುಧವಾರ ತನ್ನ ಬಾರ್‍ನ ಒಳಗಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಅಸ್ವಸ್ಥರಾದ ಅವರನ್ನು ತಕ್ಷಣವೇ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ.

ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಸೀತಾರಾಮ ಶೆಟ್ಟಿ ಅವರು ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಕಂಬಳ ಸಮಿತಿ, ಜೆಸಿಐ ಸಂಸ್ಥೆಯಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಸಹೋದರರು, ಕುಟುಂಬಸ್ಥರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹರಿಶ್ಚಂದ್ರ
ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ