ಯೂಸುಫ್ ಪೆರ್ಡೇಲ್ ನಿಧನ
Update: 2023-09-08 17:39 GMT
ಮಂಗಳೂರು: ಮೂಲತಃ ಉಪ್ಪಿನಂಗಡಿಯ ಪ್ರಸ್ತುತ ದೇರಳಕಟ್ಟೆಯಲ್ಲಿ ವಾಸವಾಗಿದ್ದ ಯೂಸುಫ್ ಪೆರ್ಡೇಲ್ (77) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ತನ್ನ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ಐವರು ಪುತ್ರರು ಮತ್ತು ಮೂವರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಕೃಷಿಕರಾಗಿದ್ದ ಇವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದು, ಜನಾನುರಾಗಿಯಾಗಿದ್ದರು. ಮೃತರ ಅಂತ್ಯಕ್ರಿಯೆಯು ಶುಕ್ರವಾರ ರಾತ್ರಿ ದೇರಳಕಟ್ಟೆಯ ಬದ್ರಿಯಾ ಜುಮಾ ಮಸ್ಜಿದ್‌ನ ಆವರಣದ ದಫನ ಭೂಮಿಯಲ್ಲಿ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.