ಹುಬ್ಬಳ್ಳಿ ರೈಲು ನಿಲ್ದಾಣ ಆಧುನೀಕರಣಕ್ಕೆ ಕ್ರಮ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Update: 2024-02-26 13:13 GMT
ಹುಬ್ಬಳ್ಳಿ : ಹುಬ್ಬಳ್ಳಿ ರೈಲ್ವೇ ನಿಲ್ದಾಣವನ್ನು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಆಧುನೀಕರಣ ಗೊಳಿಸಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಸೋಮವಾರ ಅಮೃತ್ ಭಾರತ್ ಯೋಜನೆಯಡಿ ಅಣ್ಣಿಗೇರಿ, ನವಲಗುಂದ ಮತ್ತು ಹುಲಗೂರು ರೈಲ್ವೆ ಕ್ರಾಸಿಂಗ್ ಕಾಮಗಾರಿ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ದೇಶಾದ್ಯಂತ ರೈಲ್ವೇ ನಿಲ್ದಾಣ, ಮಾರ್ಗಗಳ ಅಭಿವೃದ್ಧಿ ಕಾರ್ಯ ಸಾಗಿದೆ. ಅದರಂತೆ ಹುಬ್ಬಳ್ಳಿ ರೈಲು ನಿಲ್ದಾಣವನ್ನು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಉನ್ನತೀಕರಿಸಲಾಗುವುದು ಎಂದು ಹೇಳಿದರು.
ಪ್ರಧಾನಿ ಮೋದಿ ಅವರ ಮೂರನೆ ಅವಧಿ ಮತ್ತು ತಮ್ಮ 5ನೇ ಅವಧಿಯೊಳಗಡೆ ಹುಬ್ಬಳ್ಳಿ ರೈಲ್ವೇ ನಿಲ್ದಾಣದ ಆಧುನೀಕರಣ ಕಾಮಗಾರಿ ಸಂಪೂರ್ಣಗೊಳ್ಳುವ ಭರವಸೆ ಇದೆ. ಕರ್ನಾಟಕದಲ್ಲಿ ಒಟ್ಟು 31 ರೈಲ್ವೆ ನಿಲ್ದಾಣ, ಕ್ರಾಸಿಂಗ್ ಸೇರಿದಂತೆ 120 ಕೋಟಿ ರೂ.ಮೊತ್ತದ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ನಾವಿಂದು ಶಂಕುಸ್ಥಾಪನೆ ಮಾಡಿದ್ದೇವೆ ಎಂದರು.