ಹುಬ್ಬಳ್ಳಿ | ಬ್ಯಾಂಕ್​​ ದರೋಡೆಗೆ ವಿಫಲ ಯತ್ನ; ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸ್

Update: 2025-01-20 17:55 IST
ಹುಬ್ಬಳ್ಳಿ | ಬ್ಯಾಂಕ್​​ ದರೋಡೆಗೆ ವಿಫಲ ಯತ್ನ; ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸ್
  • whatsapp icon

ಹುಬ್ಬಳ್ಳಿ : ಬೀದರ್‌, ಮಂಗಳೂರು ಸೇರಿದಂತೆ ಸೇರಿದಂತೆ ರಾಜ್ಯದ ಕೆಲವೆಡೆ ದರೋಡೆ, ಕ‍ಳ್ಳತನ ಪ್ರಕರಣಗಳು ವರದಿಯಾಗುತ್ತಿದೆ. ಈ ಪ್ರಕರಣಗಳ ಬೆನ್ನು ಬಿದ್ದಿರುವ ಪೊಲೀಸರು, ಆರೋಪಿಗಳ ಬಂಧನಕ್ಕೆ ಬಲೆಬೀಸಿದ್ದಾರೆ. ಈ ಮಧ್ಯೆ ಹುಬ್ಬಳ್ಳಿಯಲ್ಲೂ ಬ್ಯಾಂಕ್​ ದರೋಡೆಗೆ ಕಳ್ಳರು ಯತ್ನಿಸಿರುವಂತಹ ಘಟನೆ ನಡೆದಿದ್ದು, ಕೃತ್ಯ ಎಸಗಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸೋಮವಾರ ರಾತ್ರಿ ಹುಬ್ಬಳ್ಳಿಯ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್​​​​ ದರೋಡೆಗೆ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಬ್ಯಾಂಕ್​ನ ಶೆಟರ್‌ ಬೀಗ ಮುರಿದು ದರೋಡೆಗೆ ಯತ್ನಿಸಿದ್ದು, ದುಷ್ಕರ್ಮಿಗಳ ಪ್ರಯತ್ನ ವಿಫಲವಾಗಿದೆ.

ಸದ್ಯ ಘಟನಾ ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News