ಕಾಂಗ್ರೆಸ್ ನಾಯಕರು ನುಂಗಿರುವ ವಕ್ಪ್ ಆಸ್ತಿ ವಶಪಡಿಸಿಕೊಳ್ಳಲು ಹೇಳಿದ್ದೆ : ಬೊಮ್ಮಾಯಿ ಸ್ಪಷ್ಟನೆ

Update: 2024-11-03 07:05 GMT

ಹುಬ್ಬಳ್ಳಿ : ಅನ್ವರ್ ಮಾನಿಪ್ಪಾಡಿ ವರದಿಯಲ್ಲಿರುವಂತೆ ವಕ್ಪ್ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ವಕ್ಪ್ ಆಸ್ತಿ ವಶಪಡಿಸಿಕೊಳ್ಳುವಂತೆ ವಕ್ಪ್ ಬೋರ್ಡ್‌ಗೆ ಹೇಳಿದ್ದೆ ವಿನಹ ರೈತರ ಆಸ್ತಿಯನ್ನಲ್ಲಾ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ‌.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼವಕ್ಪ್ ಸಚಿವ ಜಮೀರ್ ಅಹ್ಮದ್ ಅವರು ನನ್ನ ಹಳೆಯ ವಿಡಿಯೊ ಬಿಡುಗಡೆ ಮಾಡಿ, ನಾನು ರೈತರ ಜಮೀನು ವಶಪಡಿಸಿಕೊಳ್ಳಲು ವಕ್ಪ್ ಗೆ ಹೇಳಿದ್ದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ‌. ನಾನು ವಕ್ಪ್ ಸಮಾರಂಭದಲ್ಲಿ ಮಾತನಾಡಿದ್ದೆ. ವಕ್ಪ್ ಬೋರ್ಡ್‌ನ ಯಾವುದೇ ಸಭೆ ಮಾಡಿಲ್ಲ. ನಾನು ಅಂದು ಹೇಳಿರುವುದು ಅನ್ವರ್ ಮಾನಿಪ್ಪಾಡಿ ಅವರ ಸಮಿತಿ ವರದಿ ನೀಡಿದೆ. ಯಾವ ಕಾಂಗ್ರೆಸ್‌ನ ದೊಡ್ಡ ದೊಡ್ಡ ನಾಯಕರು ಮೋಸದಿಂದ ಎಷ್ಡೆಷ್ಟು ವಕ್ಪ್ ಆಸ್ತಿ ನುಂಗಿದ್ದಾರೆ ಎಂದು ಅನ್ವರ್ ಮಾನಿಪ್ಪಾಡಿ ವರದಿಯಲ್ಕಿ ಸ್ಪಷ್ಟವಾಗಿದೆ‌. ನಾವು ರೈತರಿಗೆ ಯಾವುದೇ ನೊಟಿಸ್ ಕೊಟ್ಟಿಲ್ಲ. ರೈತರ ಜಮೀನು ವಶ ಪಡೆದುಕೊಂಡಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಹೇಳಿರುವುದು ಕಣ್ಣೊರೆಸುವ ತಂತ್ರ. ನೋಟಿಸ್ ವಾಪಸ್ ಪಡೆದು ಚುನಾವಣೆ ಮುಗಿದ ನಂತರ ಮತ್ತೆ ನೋಟಿಸ್ ಕೊಡುವುದಿಲ್ಲ ಅನ್ನುವುದು ಏನ್ ಗ್ಯಾರೆಂಟಿ. ಅದರ ಬದಲು ವಕ್ಪ್ ನಲ್ಲಿ ಏನ್ ಗೆಜೆಟ್ ನೋಟಿಫಿಕೇಶ್ ಆಗಿದೆ ಅದನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News