'ಬಿಜೆಪಿ 40 ಪರ್ಸೆಂಟ್ ಸರ್ಕಾರ' ಆರೋಪ ಠುಸ್; ಕಾಂಗ್ರೆಸ್ ಕ್ಷಮೆ ಕೇಳಲಿ: ಪ್ರಲ್ಹಾದ ಜೋಶಿ
Update: 2024-11-17 08:46 GMT
ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತದಲ್ಲಿದ್ದ ಸಂದರ್ಭ ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ದ ಕಾಂಗ್ರೆಸ್ ಪಕ್ಷ ಈಗ ಕ್ಷಮೆ ಕೇಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.
ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 40 ಪರ್ಸೆಂಟ್ ಸರ್ಕಾರ ಎಂಬ ಕಾಂಗ್ರೆಸ್ ಆರೋಪವನ್ನು ಬಿಜೆಪಿ ಆವತ್ತೇ ಸುಳ್ಳೆಂದು ಹೇಳಿದೆ. ಈಗ ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂಬುದು ಲೋಕಾಯುಕ್ತ ತನಿಖೆಯಿಂದಲೂ ರುಜುವಾತಾಗಿದೆ ಎಂದರು.
ಲೋಕಾಯುಕ್ತ ನ್ಯಾಯಾಲಯ ಸಹ ಇದು ಹುಸಿ ಆರೋಪ ಎಂಬುದನ್ನು ಸ್ಪಷ್ಟಪಡಿಸಿದೆ. ಹಾಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಇದಕ್ಕೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.