ಸಮೀಕ್ಷೆಗಳನ್ನು ಮೀರಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ : ಪ್ರಹ್ಲಾದ್‌ ಜೋಶಿ

Update: 2024-06-02 10:45 GMT

ಹುಬ್ಬಳ್ಳಿ: "ಚುನಾವಣಾ ಸಮೀಕ್ಷೆಗಳನ್ನು ಮೀರಿ ಬಿಜೆಪಿ ಪಕ್ಷವು ಐತಿಹಾಸಿಕ ಗೆಲುವು ಸಾಧಿಸಲಿದೆ" ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, "ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ. ಬಿಜೆಪಿ ಯಾವತ್ತೂ ಇದನ್ನು ಹೇಳುತ್ತಲೇ ಬಂದಿದೆ. ಆದರೆ, ಕೆಲವರು ಸಂಶಯ ವ್ಯಕ್ತಪಡಿಸುತ್ತಿದ್ದರು. ಈಗ ಚುನಾವಣಾ ಸಮೀಕ್ಷೆಗಳೇ ಎನ್‌ಡಿಎ ಐತಿಹಾಸಿಕ ಗೆಲುವನ್ನು ಖಚಿತಪಡಿಸುತ್ತಿವೆ" ಎಂದು ಜೋಶಿ ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಎನ್‌ಡಿಎ ಪ್ರಚಂಡ ಬಹುಮತದಿಂದ ಗೆಲ್ಲಲಿದೆ. ಕರ್ನಾಟಕದಲ್ಲೂ 25ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ನಾಗೇಂದ್ರರನ್ನು ಬಂಧಿಸಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಬಂಧನವಾದರೆ ಎಲ್ಲಾ ಬಯಲಿಗೆ ಬರಲಿದೆ. ನಾಗೇಂದ್ರ ಬಂಧಿಸಿದಲ್ಲಿ ಈ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಸೇರಿದಂತೆ ಮತ್ಯಾರು, ಭಾಗಿಯಾಗಿದ್ದಾರೆ?. ಅವರ ಪಾತ್ರ ಏನಿದೆ?. ಎಂಬುದು ಗೊತ್ತಾಗಲಿದೆ. ಹಾಗಾಗಿ ರಾಜ್ಯ ಸರ್ಕಾರ ಮೊದಲು ಸಚಿವ ನಾಗೇಂದ್ರರನ್ನು ಬಂಧಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News