ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬಿಜೆಪಿ ಯಾವತ್ತೂ ಬೆಂಬಲಿಸುವುದಿಲ್ಲ : ಬಿ.ವೈ.ವಿಜಯೇಂದ್ರ

Update: 2024-05-04 07:58 GMT

ಹುಬ್ಬಳ್ಳಿ : ರಾಜ್ಯದಲ್ಲಿ ಎರಡನೇ ಹಂತದ ಮತದಾನ 7ನೇ ತಾರೀಕು ನಡೆಯಲಿದ್ದು, ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ.‌ ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನರು ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, " ಪ್ರಜ್ವಲ್ ರೇವಣ ಪ್ರಕರಣವನ್ನು ನಾವು ಯಾವತ್ತೂ ಬೆಂಬಲಿಸುವುದಿಲ್ಲ. ಕಾಂಗ್ರೆಸ್ಸಿಗೆ ತಮ್ಮ ಮೇಲೇಯೇ ತಮಗೆ ನಂಬಿಕೆ ಹೊರಟು ಹೋಗಿದೆ. ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.‌ ಆತ್ಮಹತ್ಯೆ, ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿವೆ. ದಲಿತ ಹೆಣ್ಣುಮಗಳ ಮೇಲೆ ಸದ್ದಾಂ ಹುಸೇನ್ ಎಂಬವನು ನೀಚ ಕೃತ್ಯ ಎಸಗಿದ್ದಾನೆ. ಹೀಗಿದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿಕುಳಿತಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದಾಗಲೂ ಮೀನಾಮೇಷ ಎಣಿಸುತ್ತಿದೆ. ಕೊಲೆಗಡುಕರ ವಿರುದ್ಧ ಕ್ರಮಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ"  ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಲೆಗಡುಕರಿಗೆ ರಾಜ್ಯ ಸರ್ಕಾರವೇ ರಕ್ಷಣೆ ನೀಡುತ್ತಿದೆ. ತುಷ್ಟೀಕರಣದ ರಾಜಕಾರಣಕ್ಕೆ ಜನರೇ ತಕ್ಕ ಉತ್ತರ ಕೊಡುತ್ತಾರೆ. ಕಾಂಗ್ರೆಸ್ ಹಿಂದೂ ವಿರೋಧಿ ಸರ್ಕಾರ ಎಂದು ಜನರಿಗೆ ಗೊತ್ತಾಗಿದೆ. ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜ್ವಲ್ ಪ್ರಕರಣದಂತಹ ಪ್ರಕರಣದಲ್ಲಿ ಬಿಜೆಪಿ ಯಾವುದೇ ಬೆಂಬಲ ನೀಡುವುದಿಲ್ಲ.‌ ಬಿಜೆಪಿ ನಾಯಕರಿಗೆ ಯಾವುದೇ ಪತ್ರ ಬಂದಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News