ಕಾಂಗ್ರೆಸ್ ಗೆ ಅಭ್ಯರ್ಥಿಗಳು ಸಿಗದೆ ಸಚಿವರ ಕುಟುಂಬಸ್ಥರಿಗೆ ಟಿಕೆಟ್ ನೀಡಿದ್ದಾರೆ : ಬಸವರಾಜ ಬೊಮ್ಮಾಯಿ
ಹಾವೇರಿ : ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ ಆಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದರು.
ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ. ಅದರಲ್ಲೇನು ಆಶ್ವರ್ಯ ಇಲ್ಲ. ಆದರೆ, ಈ ಬಾರಿ ಇಷ್ಟು ಪ್ರಮಾಣದಲ್ಲಿ ಕುಟುಂಬ ರಾಜಕೀಯ ನಡೆಯಲು ಕಾರಣ ಬೇರೆನೇ ಇದೆ. ಕಾಂಗ್ರೆಸ್ ನಲ್ಲಿ ಎಲ್ಲಾ ಮಂತ್ರಿಗಳಿಗೆ ಚುನಾವೇಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸುಮಾರು 10 ಜನ ಮಂತ್ರಿಗಳಿಗೆ ಹೇಳಿದ್ದರು. ಆದರೆ, ಅವರಿಗೆ ಆರಿಸಿ ಬರುವ ವಿಶ್ವಾಸ ಇರಲಿಲ್ಲ. ಹಾಗಾದರೆ ನೀವೇ ಅಭ್ಯರ್ಥಿಯನ್ನು ಕೊಡಿ ಅಂದಾಗ ಅನಿವಾರ್ಯವಾಗಿ ಅವರು ಅವರ ಮಕ್ಕಳು ಅಣ್ಣ ತಮ್ಮಂದಿರಿಗೆ ಟಿಕೇಟ್ ಕೊಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಗೆ ರಾಜಕೀಯ ಲಾಭ ಆಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಗೆ ಮತ ಹಾಕಲು ಜನ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.
ನಾಳೆ ತೀರ್ಮಾನ
ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ. ಒಳ್ಳೆ ಸಮಯ ನೋಡಿ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ಎರಡು ಸಲ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ ಎಂದು ಹೇಳಿದರು.