ಕಾಂಗ್ರೆಸ್ ಸರಕಾರ ಅವಧಿ ಪೂರ್ಣಗೊಳಿಸುವುದಿಲ್ಲ: ಬಸವರಾಜ ಬೊಮ್ಮಾಯಿ

Update: 2024-12-06 20:21 IST
Photo of Basavaraj Bommai

ಬಸವರಾಜ್ ಬೊಮ್ಮಾಯಿ

  • whatsapp icon

ಹುಬ್ಬಳ್ಳಿ : ಮುಖ್ಯಮಂತ್ರಿ ಕುರ್ಚಿಗೆ ಸಿದ್ಧರಾಮಯ್ಯ ಫೆವಿಕಾಲ್ ಹಾಕಿ ಕೂತಿದ್ದಾರೆ. ಆದರೆ, ಕಾಂಗ್ರೆಸ್‌ನಲ್ಲಿ ಸಿಎಂ, ಡಿಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆದು ಈ ಸರಕಾರ ಅವಧಿ ಪೂರ್ಣಗೊಳಿಸುವುದಿಲ್ಲ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳ ಬೇಗುದಿ ಇದೆ. ಡಿಸಿಎಂ, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಎಲ್ಲವನ್ನು ಇವರಿಬ್ಬರೇ ಮಾಡಿದರೆ ನಮ್ಮದೇನು ಪಾತ್ರ ಎಂದು ಗೃಹ ಸಚಿವ ಡಾ.ಪರಮೇಶ್ವರ್‌ಗೆ ಬಂದಿದೆ. ಬರುವ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆಯುತ್ತದೆ. ಹೀಗಾಗಿ ಈ ಸರಕಾರ ಅವಧಿ ಪೂರ್ಣಗೊಳಿಸುವುದಿಲ್ಲ ಎಂದು ಹೇಳಿದರು.

ಝೀರೋ ಸರಕಾರ :

ಹಾಸನದಲ್ಲಿ ನಡೆದ ಕಾಂಗ್ರೆಸ್ ಜನಕಲ್ಯಾಣೊತ್ಸವ ಯಾವ ಪುರುಷಾರ್ಥಕ್ಕೆ. ಜನಕಲ್ಯಾಣ ಮಾಡಲಿ ಅಂತ ಅವರಿಗೆ ಜನ ಅಧಿಕಾರ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್‌ನವರು ಜನಕಲ್ಯಾಣ ಮರೆತು ಸಮಾವೇಶದಲ್ಲಿ ಮುಳುಗಿದ್ದಾರೆ. ರಾಜ್ಯದ ಹಣಕಾಸನ್ನು ದಿವಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಇರುವುದು ಝೀರೋ ಸರಕಾರ ಎಂದು ಟೀಕಿಸಿದರು.

ಅಭಿವೃದ್ಧಿಯಲ್ಲಿ ಝೀರೋ, ಸಾಮಾಜಿಕ ನ್ಯಾಯಾಲಯದಲ್ಲಿ ಝೀರೋ, ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಝೀರೋ. ಹಣಕಾಸಿನ ದಿವಾಳಿ ಮಾಡಿ ಅಭಿವೃದ್ಧಿ ಶೂನ್ಯ ಮಾಡಿದೆ. ಹೆಜ್ಜೆ ಹೆಜ್ಜೆಗೂ ಹಗರಣಗಳನ್ನು ಮಾಡುತ್ತಿದೆ. ಕೋರ್ಟ್ನಲ್ಲಿ ನಡೆಯುತ್ತಿರುವ ಕೇಸ್ ಮೇಲೆ ಪ್ರಭಾವ ಬೀರಲು ಸಮಾವೇಶ ಮಾಡಿದ್ದಾರೆ. ಸರಕಾರಿ ದುಡ್ಡಿನಲ್ಲಿ ಸಮಾವೇಶ ಆಯೋಜನೆ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಅದೇ ಹಣವನ್ನು ಅಭಿವೃದ್ಧಿಗೆ ಬಳಕೆ ಮಾಡಬಹುದಿತ್ತು. ಸಮಾವೇಶ ಮಾಡಿಕೊಳ್ಳುವ ಮೂಲಕ ಸಿಎಂ ತಮಗೆ ಆನೆ ಬಲ ತುಂಬಿಕೊಳ್ಳುವುದಲ್ಲ. ಜನರಿಗೆ ಆನೆ ಬಲ ತುಂಬುವ ಕೆಲಸ ಆಗಬೇಕಿದೆ. ಅಸ್ಥಿರತೆಯಲ್ಲಿ ಸಿದ್ದರಾಮಯ್ಯ ಕಾಲ ದೂಡುತ್ತಿದ್ದಾರೆ. ವಿಪಕ್ಷವಾಗಿ ಸರಕಾರದ ತಪ್ಪುಗಳನ್ನು ಪ್ರಶ್ನಿಸುವುದು ನಮ್ಮ ಕೆಲಸ ಎಂದರು.

‘ಬಿಜೆಪಿ ಬಣ ರಾಜಕಾರಣ ಸಹಿತ ಇತ್ಯಾದಿ ವಿಷಯಗಳು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಲಿವೆ. ಈಗಾಗಲೇ ಸದಸ್ಯತ್ವ ಅಭಿಯಾನ ಮುಗಿಸಿದ್ದೇವೆ. ಸದಸ್ಯತ್ವ ಅಭಿಯಾನದ ನಂತರ ರಾಜಕೀಯವಾಗಿ ಹಲವಾರು ಬೆಳವಣಿಗೆಗಳು ನಡೆದಿವೆ. ಸಂಘಟನಾತ್ಮಕ ಬೆಳವಣಿಗೆ, ರಾಜಕೀಯ ಸ್ಥಿತಿಗತಿಗಳ ಕುರಿತು ಕೋರ್ ಕಮಿಟಿಯಲ್ಲಿ ಚರ್ಚಿಸುತ್ತೇವೆ. ಬಿಜೆಪಿಯ ಆಂತರಿಕ ವಿಚಾರಗಳೂ ಚರ್ಚೆಯಾಗಲಿವೆ’

ಬಸವರಾಜ ಬೊಮ್ಮಾಯಿ ಸಂಸದ

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News