ದಿಂಗಾಲೇಶ್ವರ ಸ್ವಾಮೀಜಿ ಮೇಲೆ ಪ್ರಕರಣ ದಾಖಲಾಗುವಲ್ಲಿ ನನ್ನ ಪಾತ್ರವಿಲ್ಲ : ಪ್ರಹ್ಲಾದ್‌ ಜೋಶಿ

Update: 2024-05-05 07:40 GMT

ಹುಬ್ಬಳ್ಳಿ : ದಿಂಗಾಲೇಶ್ವರ ಸ್ವಾಮೀಜಿ ವಿಚಾರದಲ್ಲಿ ನಾನು ಯಾವುದೇ ಅಧಿಕಾರಿಗಳ ಮೇಲೂ ಪ್ರಭಾವ ಬೀರಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ನಾನು ಪ್ರಭಾವ ಬೀರಲು ಸಾಧ್ಯವೇ?. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಅಧಿಕಾರಿಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಇನ್ನು, ಕಾಂಗ್ರೆಸ್ ಸರ್ಕಾರ ಇರುವಾಗ ಅಧಿಕಾರಿಗಳು ನಮ್ಮ ಮಾತು ಕೇಳುತ್ತಾರೆಯೇ?" ಎಂದು ಪ್ರಶ್ನಿಸಿದರು.

"ದಿಂಗಾಲೇಶ್ವ ಅವರ ಮೇಲೆ ನವಲಗುಂದ ಮತ್ತು ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲಾಗಲು ನನ್ನ ಪಾತ್ರ ಏನಿಲ್ಲ. ಹುಬ್ಬಳ್ಳಿ- ಧಾರವಾಡದಲ್ಲಿ ಏನೇ ಆದರೂ ಪ್ರಪ್ರಹ್ಲಾದ್‌ ಜೋಶಿ ಕಾರಣ ಎನ್ನುವುದು ಕೆಲವರಿಗೆ ಅಭ್ಯಾಸ ಆಗಿಬಿಟ್ಟಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಜಿಲ್ಲೆಯಲ್ಲಿ ಬಿಜೆಪಿ ಅವಧಿಯಲ್ಲಿ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಹಾಗಿದ್ದರೂ ನಮ್ಮ ಮೇಲೆ ಗೂಬೆ ಕೂರಿಸುವುದು ಹಾಸ್ಯಾಸ್ಪದ ಎಂದು ಜೋಶಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News