ಈಶ್ವರಪ್ಪ ಹಿರಿಯ ನಾಯಕರು, ಮನವೊಲಿಸುವ ವಿಶ್ವಾಸವಿದೆ: ಸಚಿವ ಪ್ರಹ್ಲಾದ್ ಜೋಶಿ

Update: 2024-03-16 07:06 GMT

ಹುಬ್ಬಳ್ಳಿ, ಮಾ.16: ಲೋಕಸಭೆ ಚುನಾವಣೆ ಟಿಕೆಟ್ ಸಿಗದಿದ್ದರಿಂದ ಕೆ.ಎಸ್.ಈಶ್ವರಪ್ಪರಿಗೆ ಬೇಸರ ಆಗಿರಬಹುದು. ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪರ ಜತೆ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಸ್ಥಳೀಯ ನಾಯಕರು ಮಾತುಕತೆ ನಡೆಸಿ ಬೇಸರ ದೂರ ಮಾಡಲಿದ್ದಾರೆ ಎಂದು ತಿಳಿಸಿದರು.

ಈಶ್ವರಪ್ಪ ಅತ್ಯಂತ ಹಿರಿಯ ನಾಯಕರು. ನನಗಿಂತ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇದ್ದವರು. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅನ್ಯ ಯೋಚನೆ ಮಾಡಲಾರರು. ಅವರನ್ನು ಸದ್ಯದಲ್ಲೇ ನಾನೂ ಭೇಟಿ ಮಾಡಿ ಮಾತನಾಡುವೆ. ಅವರ ಮನವೊಲಿಸುವ ವಿಶ್ವಾಸವಿದೆ. ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ಸಚಿವ ಜೋಶಿ ತಿಳಿಸಿದರು.

ಟಿಕೇಟ್ ಸಿಗದೇ ಇದ್ದಾಗ ಸಹಜವಾಗಿಯೇ ಎಲ್ಲರಿಗೂ ಬೇಸರ ಆಗುತ್ತದೆ. ಹಾಗಾಗಿ ಪರ-ವಿರೋಧ ಅಭಿಪ್ರಾಯ ಸಾಮಾನ್ಯವಾಗಿರುತ್ತದೆ. ಆದರೆ, ಪಕ್ಷದ ಹೈಕಮಾಂಡ್ ಅದೆಲ್ಲವನ್ನು ಸರಿಪಡಿಸುತ್ತದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News