ಹುಬ್ಬಳ್ಳಿ | ಸಿಲಿಂಡರ್ ಸ್ಫೋಟ ಪ್ರಕರಣ : ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
Update: 2024-12-26 07:59 GMT
ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಮೃತ ಅಯ್ಯಪ್ಪ ಮಾಲಾಧಾರಿಗಳನ್ನು 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದೆ.