ಹುಬ್ಬಳ್ಳಿ: ಚರಂಡಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Update: 2024-08-16 09:15 GMT

ಹುಬ್ಬಳ್ಳಿ:  ಹಳೇ ಹುಬ್ಬಳ್ಳಿಯ ಆನಂದನಗರ ರಸ್ತೆಯ ಚರಂಡಿಯಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಚರಂಡಿಯಲ್ಲಿ ಬಿದ್ದು, ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸ್ ತನಿಖೆಯ ನಂತರವೇ  ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.



 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News