ಹುಬ್ಬಳ್ಳಿ: ಚಾಕುವಿನಿಂದ ಇರಿದು ಅರ್ಚಕನ ಕೊಲೆ
Update: 2024-07-21 18:06 GMT
ಹುಬ್ಬಳ್ಳಿ: ಹುಬ್ಬಳ್ಳಿಯ ವೈಷ್ಟೋದೇವಿ ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ಘಟನೆ ನಗರದ ಎಪಿಎಂಸಿ ಬಳಿಯ ಈಶ್ವರನಗರದಲ್ಲಿ ನಡೆದಿದೆ.
ವೈಷ್ಟೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ದೇವೇಂದ್ರಪ್ಪ ಹೊನ್ನಳಿ ಎಂಬವರು ಹತ್ಯೆಯಾಗಿದ್ದು, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದ್ದು ಪರಾರಿಯಾಗಿದ್ದು ಎನ್ನಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ಮಹಾಲಿಂಗಪ್ಪ ನಂದಗವಿ, ನವನಗರ ಎಪಿಎಂಸಿ ಠಾಣೆಯ ಇನ್ಸೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.