ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ : ನಾಲ್ವರು ಮೃತ್ಯು
Update: 2025-04-06 18:45 IST

ಹುಬ್ಬಳ್ಳಿ : ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.
ಸುಜಾತಾ (61), ಶಂಕುತಲಾ (75), ಸಂಪತ್ ಕುಮಾರಿ (60), ಗಾಯತ್ರಿ (65 ಮೃತರು ಎಂದು ತಿಳಿದು ಬಂದಿದೆ.
ಹಾವೇರಿಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ನೂಲ್ವಿ ಕ್ರಾಸ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಪಕ್ಕದ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.