ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿ ರಾಡ್​ ಬಿದ್ದು ಗಾಯಗೊಂಡಿದ್ದ ಎಎಸ್​ಐ ಮೃತ್ಯು

Update: 2024-09-15 04:30 GMT

ಹುಬ್ಬಳ್ಳಿ: ಫ್ಲೈಓವರ್ ಕಾಮಗಾರಿಯ ವೇಳೆ ರಾಡ್​ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸೆಪ್ಟೆಂಬರ್​ 10ರಂದು ಕೋರ್ಟ್ ವೃತ್ತದ ಬಳಿ ಕರ್ತವ್ಯದ ವೇಳೆ ಫ್ಲೈಓವರ್ ಕಾಮಗಾರಿಯ ರಾಡ್​ ಬಿದ್ದು ಎಎಸ್​ಐ ನಾಭಿರಾಜ್ ದಯಣ್ಣವರ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು.  ಆದರೆ ಚಿಕಿತ್ಸೆ ಫಲಿಸದೇ ಬೆಳಿಗ್ಗೆ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News