ಹುಬ್ಬಳ್ಳಿ: ಪೊಲಿಸರ ಮೇಲೆ ಹಲ್ಲೆಗೆ ಯತ್ನ; ದರೋಡೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

Update: 2024-08-02 06:50 GMT

ಆರೋಪಿ ಅರುಣ್

ಹುಬ್ಬಳ್ಳಿ: ದರೋಡೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಲಿಸರು  ಆರೋಪಿಯ ಕಾಲಿಗೆ ಗುಂಡು ಹಾರಿಸಿರುವ ಘಟನೆ ಹುಬ್ಬಳ್ಳಿ ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಆರೋಪಿಯನ್ನು ಅರುಣ್‌ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಸ್. ಹೂಗಾರ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಹುಬ್ಬಳ್ಳಿ ಉಪನಗರ ಠಾಣೆಯ ವ್ಯಾಪ್ತಿಯ ಚೆನ್ನಮ್ಮ ವೃತ್ತದ ಬಳಿ  ಕಳೆದ ಕೆಲವು ದಿನಗಳ ಹಿಂದೆ ಚೈನು, ಉಂಗುರು, ಫೋನ್ ಹಾಗೂ ಹಣ ದರೋಡೆ ಪ್ರಕರಣ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪನಗರ ಠಾಣೆಯ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಆರೋಪಿ ಅರುಣನನ್ನು ಬಂಧಿಸಿದ್ದಾರೆ.

 ವಿಚಾರಣೆ ನಡೆಸಿದ ಸಂದರ್ಭ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರ ಮಾಹಿತಿ ನೀಡುತ್ತೇನೆಂದು ಎಂಟಿಎಸ್ ಕಾಲೋನಿಗೆ ಕರೆದುಕೊಂಡು ಹೋದ ಆರೋಪಿ ಅರುಣ್,  ಪೊಲೀಸರ ಗಮನವನ್ನು ಬೇರೆಡೆ ಸೆಳೆದು ಪರಾರಿಯಾಗಲು ಯತ್ನಿಸಿದ್ದಲ್ಲದೇ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ  ಆರೋಪಿ ಅರುಣ್ ಕಾಲಿಗೆ ಇನ್ಸ್ಪೆಕ್ಟರ್ ಎಮ್.ಎಸ್.ಹೂಗಾರ ಗುಂಡು ಹಾರಿಸಿದ್ದಾರೆ. ಪರಿಣಾಮ ಆರೋಪಿ ಕಾಲಿಗೆ ಗಾಯವಾಗಿದ್ದು, ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಲಾಗಿದೆ ಎಂದು ತಿಳಿದುಬಂದಿದೆ.

 ಘಟನೆಗೆ ಸಂಬಂಧಿಸಿ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News