ಹುಬ್ಬಳ್ಳಿ | ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ
Update: 2024-07-03 15:03 GMT
ಹುಬ್ಬಳ್ಳಿ : ನಗರದ ಗಾಮನಗಟ್ಟಿ ಗ್ರಾಮದ ತರಿಹಾಳ್‌ನ ರಸ್ತೆ ಬದಿಯ ಚರಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾದ ಅಮಾನವೀಯ ಘಟನೆ ವರದಿಯಾಗಿದೆ.
ನವಜಾತು ಶಿಶುವಿನ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಶಿಶುವನ್ನು ಚರಂಡಿಗೆ ಎಸೆದು ಹೋದ ಹಿನ್ನಲೆಯಲ್ಲಿ ಸಾರ್ವಜನಿಕರು ಮಗುವನ್ನು ನೋಡಿ, ಎಪಿಎಂಸಿ ನವನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ನವಜಾತ ಶಿಶುವಿನ ಮೃತದೇಹವನ್ನು ಚರಂಡಿಯಿಂದ ಹೊರ ತೆಗೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.