ಹುಬ್ಬಳ್ಳಿ : ಗ್ಯಾಂಗ್ ವಾರ್ ಪ್ರಕರಣ; ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ
ಹುಬ್ಬಳ್ಳಿ : ರೌಡಿ ಶೀಟರೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ರವಿವಾರ ತಡರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯ ಬುಡರಸಿಂಗಿ ರಸ್ತೆಯಲ್ಲಿ ನಡೆದಿದೆ.
ರೌಡಿಶೀಟರ್ ಅಫ್ತಾಬ್ ಕರಡಿಗುಡ್ಡ ಪೊಲೀಸರಿಂದ ಗುಂಡೇಟು ತಿಂದಿದ್ದ ಆರೋಪಿ. ಗ್ಯಾಂಗವಾರ್ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯು ತಪ್ಪಿಸಿಕೊಳ್ಳಲು ಮುಂದಾಗಿದ್ದ ಎನ್ನಲಾಗಿದೆ.
ಕಳೆದ ಭಾನುವಾರದಂದು ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್ ವಾರ್‌ನಲ್ಲಿ ಜಾವೂರ್ ಎಂಬಾತ ಗಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕಸಬಾ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರು ತಂಡ ತೆರಳಿತ್ತು. ಆದರೆ ಈ ವೇಳೆ ಅಫ್ತಾಬ್ ಪೊಲೀಸ್ ಸಿಬ್ಬಂದಿಗಳಾದ ರಾಜು ರಾಠೋಡ್ ಮತ್ತು ಪಾಲಯ್ಯ ಮೇಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಕೂಡಲೇ ಅಲರ್ಟ್ ಆದ ಇನ್ಸ್ಪೆಕ್ಟರ್ ರಾಘವೇಂದ್ರ ಅವರು ಅಪ್ತಾಬ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಗಾಯಾಳು ಆರೋಪಿ ಸೇರಿ ಪೋಲೀಸ ಸಿಬ್ಬಂದಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಹುಬ್ಬಳ್ಳಿ ಧಾರವಾಡ ಕಮಿಷನರ್ ಎನ್ ಶಶಿಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಸಿಬ್ಬಂದಿ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಕಸಬಾ ಪೊಲೀಸ ಠಾಣೆ ವ್ಯಾಪ್ತಿಯ ಸದರ್ ಸೋಫಾ ಬ್ಯಾಹಟಿ ಪಾರ್ಕ ಬಳಿ ಭಾನುವಾರ ಎರಡು ಗುಂಪುಗಳ ಮದ್ಯ ಗಲಾಟೆ ನಡೆದು ಜಾವೂರ್ ಎಂಬಾತನಿಗೆ ಗಂಭೀರ ಗಾಯವಾಗಿತ್ತು. ಇದರಲ್ಲಿ ಜಾವೂರ್ ಟೀಂ ಮತ್ತೊಂದು ಟೀಂನ ಮೇಲೆ ಹಲ್ಲೆಗೆ ಮುಂದಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ಕೌಂಟರ್ ದೂರು ನೀಡಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಏಳು ಜನರನ್ನು ರಾತ್ರಿಯೇ ಬಂಧನ ಮಾಡಲಾಗಿದೆ. ಆರೋಪಿ ಅಫ್ತಾಬ್ ಬುಡರಸಿಂಗಿ ಬಳಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ತಪಿಸಿಕೊಳ್ಳಲು ಮುಂದಾಗಿದ್ದ ಸಂದರ್ಭದಲ್ಲಿ ನಮ್ಮ ಠಾಣೆ ಇನ್ಸ್ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಈಗ ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಬಡ್ಡಿ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಮೀಟರ್ ಬಡ್ಡಿ ವಸೂಲಿ ಮಾಡಲು ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರನ್ನು ಬಳಸಿಕೊಳ್ಳಲಾಗುತ್ತಿರುವ ಅಂಶ ಬೆಳಕಿಗೆ ಬಂದಿದೆ. ಈ ಬಗ್ಗೆಯೂ ಕೂಡ ತನಿಖೆ ನಡೆಸಲಾಗುತ್ತಿದೆ. ಯಾರು ಬಡ್ಡಿ ಕೊಡುತ್ತಾರೆ ಎಂಬ ಬಗ್ಗೆ ತನಿಖೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು.
ಬೈಟ್- ಎನ್ ಶಶಿಕುಮಾರ್, ಹು-ಧಾ ಪೊಲೀಸ್ ಕಮಿಷನರ್