ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ | ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತ್ಯು, ಸಾವಿನ ಸಂಖ್ಯೆ 7ಕ್ಕೆ ಏರಿಕೆ

Update: 2024-12-30 22:52 IST
ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ | ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತ್ಯು, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ತೇಜಸ್ ಸತಾರೆ(26) 

  • whatsapp icon

ಹುಬ್ಬಳ್ಳಿ: ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿ.22ರಂದು ಸಿಲಿಂಡರ್ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಆ ಮೂಲಕ ಮೃತಪಟ್ಟವರ ಸಂಖ್ಯೆ 7ಕ್ಕೇರಿಕೆ ಆಗಿದೆ.

ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತೇಜಸ್ ಸತಾರೆ(26) ಕೊನೆಯುಸಿರೆಳೆದಿದ್ದಾರೆ. ಒಬ್ಬನೇ ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲನಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 22ರಂದು ರಾತ್ರಿ ಸಿಲಿಂಡರ್ ಸ್ಫೋಟಗೊಂಡು ಒಂಭತ್ತು ಮಂದಿ ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ನಗರದ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಈ ಪೈಕಿ 7 ಮಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News