ಹುಬ್ಬಳ್ಳಿ | ತುಂಬು ಗರ್ಭಿಣಿ ಮೃತ್ಯು : ಪತ್ನಿ ಸಾವಿನಿಂದ ಮನನೊಂದು ಪತಿ ಆತ್ಮಹತ್ಯೆಗೆ ಯತ್ನ
ಹುಬ್ಬಳ್ಳಿ : ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಗೋಕಾಕ್ ತಾಲೂಕಿನ ತುಂಬು ಗರ್ಭಿಣಿ ಚಿಕಿತ್ಸೆ ಫಲಿಸದೆ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ.
ಗೋಕಾಕ ತಾಲೂಕಿನ ಮೇಲಮಟ್ಟಿ ಗ್ರಾಮದ ರಾಧಿಕಾ ಮಲ್ಲೇಶ ಗಡ್ಡಿಹೊಳೆ (19) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಈ ವಿಷಯ ತಿಳಿದು ಅವರ ಪತಿ ಮಲ್ಲೇಶ್ ಅವರು ವಿಷಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಮಲ್ಲೇಶ್ಗೆ ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗರ್ಭಿಣಿಯಾಗಿದ್ದ ರಾಧಿಕಾ ಅವರು ಆರು ಬಾರಿ ಫಿಟ್ಸ್ಗೆ ಒಳಗಾಗಿದ್ದರು. ಇವರ ಗರ್ಭಕೋಶದಲ್ಲಿಯೇ 8 ತಿಂಗಳ ಮಗು ಮೃತಪಟ್ಟಿತ್ತು. ಸೋಮವಾರ ಇವರನ್ನು ಬೆಳಗಾವಿಯ ಬಿಮ್ಸ್ನಿಂದ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ರಾಧಿಕಾ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.