ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ : ಮೂವರು ಮೃತ್ಯು, ಓರ್ವ ಗಂಭೀರ

Update: 2024-04-16 06:00 GMT

ಹುಬ್ಬಳ್ಳಿ : ಖಾಸಗಿ ಟ್ರಾವೆಲ್ಸ್ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ.

ಅಂಚಟಗೇರಿ ಬಳಿ ಬೆಳಗಿನ ಜಾವ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಅಲ್ಲದೆ, ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌‌ ಎಂದು ತಿಳಿದು ಬಂದಿದೆ.

ಮೃತರು ಆಂಧ್ರದ ಕರ್ನೂಲ ಜಿಲ್ಲೆಯ ನಿವಾಸಿಗಳಾಗಿದ್ದು, ಮೃತರ ಹೆಸರು ತಿಳಿದು ಬಂದಿಲ್ಲ. ಕಾರಿನಲ್ಲಿ ಮದ್ಯದ ಬಾಟಲ್ ಗಳು ಪತ್ತೆಯಾಗಿದೆ ಎನ್ನಲಾಗಿದ್ದು, ಕುಡಿದ ಮತ್ತಿನಲ್ಲಿ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News